Wednesday, January 15, 2014

ಮಡೆಮಡೆಸ್ನಾನಕ್ಕೆ ಸುಪ್ರೀಂಕೋರ್ಟ್ ಅಸ್ತು!




ಜೈ ತುಳುನಾಡು....


ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಮೂರು ದಿನಗಳ ಕಾಲ ನಡೆ ಯುವ ಮಡೆಮಡೆಸ್ನಾನ ಹರಕೆ ಸೇವೆಯನ್ನು ನಿಷೇಧಿಸುವಂತೆ ಕೋರಿ ನಿಡುಮಾಮಿಡಿ ಸ್ವಾಮಿ ಹಾಗೂ ಇತರರು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನಿನ್ನೆ ನ್ಯಾಯಾಲಯ ವಜಾಗೊಳಿಸಿದೆ.

ಮಡೆಮಡೆಸ್ನಾನ ಧಾರ್ಮಿಕ ನಂಬಿಕೆಯ ವಿಚಾರವಾಗಿದ್ದು ನ್ಯಾಯಾಲಯ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ರಿಟ್ ಅರ್ಜಿಯನ್ನು ವಜಾಗೊಳಿಸುತ್ತಾ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಬ್ರಹ್ಮಣ್ಯ ದೇವಳದ ಮೂಲ ನಿವಾಸಿಗಳಾದ ಮಲೆಕುಡಿಯರು ಕ್ಷೇತ್ರದ ಸಂಪ್ರದಾಯ ಮತ್ತು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ ಎಂದು ಮಲೆಕುಡಿಯರ ಸಂಘದ ರಾಜ್ಯಾಧ್ಯಕ್ಷ ಭಾಸ್ಕರ ಬೆಂಡೋಡಿ ತಿಳಿಸಿದ್ದಾರೆ. ಇದೇ ವೇಳೆ ಕುಕ್ಕೆ ಕ್ಷೇತ್ರದಲ್ಲಿ ಜಾತ್ರೆಯ ವೇಳೆ ಹೊರಾಂಗಣದಲ್ಲಿ ಮೂರು ದಿನಗಳ ಕಾಲ ನಡೆಯುವ ಅನ್ನದಾನದಲ್ಲಿ ಪಂಕ್ತಿಭೇದವಿದೆ. ಇದನ್ನು ನಿಲ್ಲಿಸಿ ಎಂದು ಸುಳ್ಯ ತಾಲೂಕಿನ ಕರುಣಾಕರ ಎಣ್ಣೆಮಜಲು ಹೈಕೋರ್ಟ್‍ಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕ್ಷೇತ್ರದಲ್ಲಿ ಬ್ರಾಹ್ಮಣ, ಪುರೋಹಿತ ಸಮುದಾಯದವರಿಗೆ ಪ್ರತ್ಯೇಕ ಅನ್ನದಾನ ಮಾಡುವುದು ಸಂಪ್ರದಾಯವಾಗಿ ನಡೆದುಕೊಂಡು ಬಂದಿದೆ. ಇದು ಪಂಕ್ತಿಭೇದ ವಿಚಾರಕ್ಕೆ ಬರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.


ಕೃಪೆ : -#kaushi #js #shetty (#hindu #rockss)

No comments:

Post a Comment